ಕುವೆಂಪು

Tuesday, 4 November 2014 Labels:

ಕುವೆಂಪು - ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪) - ಕನ್ನಡವು ಪಡೆದ ಅತ್ಯುತ್ತಮ ಕವಿ, ಎರಡನೆ ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದಪ್ರ ಪ್ರಥಮ ವ್ಯಕ್ತಿ. 'ವಿಶ್ವ ಮಾನವ' ಪರಿಕಲ್ಪನೆಯನ್ನೂ ಸಾಹಿತ್ಯದ ಮೂಲಕ ಸಮಾಜಕ್ಕೆ ತಲುಪಿಸಿದವರು. ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ. ಕುವೆಂಪುರವರ ಮೊದಲ ಕಾವ್ಯನಾಮ-"ಕಿಶೋರ ಚಂದ್ರವಾಣಿ" -ನಂತರ ಅವರು ಕುವೆಂಪು ಕಾವ್ಯನಾಮ ಬಳಸಿ ಬರೆಯತೊಡಗಿದರು. ಡಿಸೆಂಬರ್ ೨೯, ೧೯೦೪, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆಯಲ್ಲಿ ಜನಿಸಿದ ಇವರು, ಕುಪ್ಪಳಿ (ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು) ಹಾಗೂ ಮೈಸೂರಿನಲ್ಲಿ ಪರಪುಟ್ಟ ಹಕ್ಕಿಯಂತೆ ಬೆಳೆದರು. ಮೈಸೂರಿನ 'ಮಹಾರಾಜಾ' ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪ ಕುಲಪತಿಯಾಗಿ ನಿವೃತ್ತರಾದರು. ಇವರು ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ "ಉದಯರವಿ"ಯಲ್ಲಿ ವಾಸಿಸುತ್ತಿದ್ದರು. ಇವರ ಹೆಂಡತಿಯ ಹೆಸರು ಹೇಮಾವತಿ ಮತ್ತು ಇವರಿಗೆ ನಾಲ್ಕು ಜನ ಮಕ್ಕಳು(ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ, ತಾರಿಣಿ ಚಿದಾನಂದ).