ಜಿ.ಎಸ್.ಶಿವರುದ್ರಪ್ಪ

Tuesday 4 November 2014 Labels:

ಡಾಡಾಡಾಡಾ.ಜಿ.ಎಸ್.ಶಿವರುದ್ರಪ್ಪನವರು ಶಿವಮೊಗ್ಗಜಿಲ್ಲೆಯ ಶಿಕಾರಿಪುರದ ಹತ್ತಿರವಿರುವ ಈಸೂರುಗ್ರಾಮದಲ್ಲಿ ಫೆಬ್ರುವರಿ ೭, ೧೯೨೬ ರಂದು ಜನಿಸಿದರು. ತಂದೆ ಶಾಂತವೀರಪ್ಪ ಅಲ್ಲಿನ ಮಾಧ್ಯಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು.ತಾಯಿ ವೀರಮ್ಮ. ತಂದೆಯಿಂದ ಸಾಹಿತ್ಯದ ಗೀಳು ಹತ್ತಿಸಿಕೊಂಡ ಶಿವರುದ್ರಪ್ಪನವರು ಹೊನ್ನಾಳಿ, ಕೋಟೆಹಾಳ ಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಗಿರಿ, ಬೆಲಗೂರುಗಳಲ್ಲಿ ಮಾಧ್ಯಮಿಕ ಶಿಕ್ಷಣವನ್ನು,ದಾವಣಗೆರೆ, ತುಮಕೂರುಗಳಲ್ಲಿ ಪ್ರೌಢಶಾಲಾ, ಇಂಟರ್ ಮೀಡಿಯಟ್ ಶಿಕ್ಷಣವನ್ನೂ ಮುಗಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ (೧೯೪೯) ಪದವಿ ಪಡೆದರು. ಕೆಲಕಾಲ ದಾವಣಗೆರೆಯ ಡಿ.ಆರ್.ಎಮ್. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದು ನಂತರ ಎಂ.ಎ. (೧೯೫೩) ಪ್ರ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಮೂರು ಸುವರ್ಣ ಪದಕಗಳನ್ನು ಪಡೆದರು. ೧೯೫೫ರಲ್ಲಿ ಭಾರತ ಸರಕಾರದ ಸಂಶೋಧನಾ ಶಿಷ್ಯ ವೇತನದ ಸಹಾಯದಿಂದ ಕುವೆಂಪುರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದರು. ಮೈಸೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ದೊರಕಿಸಿ ಕೊಟ್ಟ ಇವರ ಪ್ರೌಢ ಪ್ರಬಂಧ -ಸೌಂದರ್ಯ ಸಮೀಕ್ಷೆ. ಕುವೆಂಪುರವರ ಮೆಚ್ಚಿನ ಶಿಷ್ಯರಾಗಿ ಅವರ ಬರವಣಿಗೆ ಮತ್ತು ಜೀವನದಿಂದ ಪ್ರಭಾವಿತರಾಗಿದ್ದರು.